Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:6 - ಕನ್ನಡ ಸತ್ಯವೇದವು C.L. Bible (BSI)

6 ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ, ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಯಾಜಕಾಂಚ್ಯಾ ಮುಖಂಡಾನಿ, ಅನಿ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾನಿ ತೆಕಾ ಬಗಟಲ್ಲ್ಯಾ ಬರಬ್ಬರ್, “ತೆಕಾ ಕುರ್ಸಾರ್ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ಪಿಲಾತಾನ್ ತೆಂಕಾ “ತುಮಿಚ್ ತೆಕಾ ಘೆವ್ನ್ ಜಾವಾ, ಅನಿ ಕುರ್ಸಾರ್ ಮಾರಾ, ಮಾಕಾ ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕೆ ಚುಕ್ ತೆಚ್ಯಾ ಭುತ್ತುರ್ ಗಾವುಕ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:6
15 ತಿಳಿವುಗಳ ಹೋಲಿಕೆ  

ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.


ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.


ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.


ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.


ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು