Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:15 - ಕನ್ನಡ ಸತ್ಯವೇದವು C.L. Bible (BSI)

15 ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರಿಂದ ಕುರಿ ದನ ಸಹಿತ ಎಲ್ಲರನ್ನು ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ರೊಕ್ಕವನ್ನು ಚೆಲ್ಲಿ ಮೇಜುಗಳನ್ನು ಕೆಡವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಜೆಜುನ್ ಬಾರಿಕ್- ಬಾರಿಕ್ ದೊರಿಯಾನಿ ಎಕ್ ಬಾರ್‍ಕೊಲ್ ಕರ್ಲ್ಯಾನ್, ಅನಿ ಸಗ್ಳ್ಯಾ ಜನಾವರಾಕ್ನಿ, ಬಕ್ರ್ಯಾಕ್ನಿ, ಗೊರಾಕ್ನಿ ಭಾಯ್ರ್ ಹಂಬಡ್ಲ್ಯಾನ್, ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಂಚಿ ಮೆಜಾ ಪಾಡ್ವುನ್ ಘಾಟ್ಲ್ಯಾನ್ ಅನಿ ತೆಂಚೆ ಪೈಸೆ ಮಾಳ್ಬರ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:15
7 ತಿಳಿವುಗಳ ಹೋಲಿಕೆ  

ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


“ನಾನೇ ಆತನು,” ಎಂದು ಯೇಸು ನುಡಿಯುತ್ತಲೇ, ಅವರೆಲ್ಲರೂ ಹಿಂದೆ ಸರಿದು ನೆಲದ ಮೇಲೆ ಬಿದ್ದರು.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.


ಕೂಡಲೇ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು