Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:18 - ಕನ್ನಡ ಸತ್ಯವೇದವು C.L. Bible (BSI)

18 ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೂದ್ಯರು ಆತನನ್ನು - ನಿನಗೆ ಇದನ್ನೆಲ್ಲಾ ಮಾಡುವ ಅಧಿಕಾರ ಉಂಟೆಂಬದಕ್ಕೆ ಏನು ಸೂಚಕ ಕಾರ್ಯವನ್ನು ತೋರಿಸುತ್ತೀ? ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುದೆವಾಂಚ್ಯಾ ಅದಿಕಾರ್‍ಯಾನಿ ತೆಚ್ಯಾಕ್ಡೆ ಯೆವ್ನ್ ತಿಯಾ ಕಸ್ಲೆ ಕಾಮ್ ಕರುನ್ ದಾಕ್ವುಕ್ ಹೊತಾ ತೆಚ್ಯಾ ವೈನಾ ತುಕಾ ಅದಿಕಾರ್ ಹಾಯ್ ಮನುನ್ ಸಾಬಿತ್ ಹೊತಾ. ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:18
14 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.


ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.


ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


"ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.


ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು