Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:2 - ಕನ್ನಡ ಸತ್ಯವೇದವು C.L. Bible (BSI)

2 ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:2
30 ತಿಳಿವುಗಳ ಹೋಲಿಕೆ  

ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಪತಿ ಬದುಕಿರುವವರೆಗೂ ಸತಿ ಅವನಿಗೆ ಬಂಧಿತಳು. ಅವನು ಸತ್ತರೆ ತಾನು ಇಷ್ಟಪಟ್ಟವನನ್ನು ಮತ್ತೆ ಮದುವೆ ಆಗಲು ಸ್ವತಂತ್ರಳು. ಆದರೆ ಅವನು ಕ್ರೈಸ್ತವಿಶ್ವಾಸಿಯಾಗಿರಬೇಕು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.


ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.


‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.


ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.


ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.


(ವಾಸ್ತವವಾಗಿ ದೀಕ್ಷಾಸ್ನಾನವನ್ನು ಮಾಡಿಸುತ್ತಿದ್ದವರು ಯೇಸುವಿನ ಶಿಷ್ಯರೇ ಹೊರತು ಯೇಸುವಲ್ಲ).


ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.


ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.


ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು,


ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.


ಸಾಯಂಕಾಲವಾದ ಮೇಲೆ ಯೇಸು ಸ್ವಾಮಿಯ ಶಿಷ್ಯರು ಸರೋವರಕ್ಕೆ ಹೋಗಿ


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು.


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.


“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು