Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:22 - ಕನ್ನಡ ಸತ್ಯವೇದವು C.L. Bible (BSI)

22 ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ಆತನು ಸತ್ತು ಬದುಕಿ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಶಾಸ್ತ್ರದಲ್ಲಿ ಬರೆದದ್ದನ್ನೂ ಆತನ ಮಾತನ್ನೂ ಅವರು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಸತ್ತವರೊಳಗಿಂದ ಎದ್ದುಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ತೊ ಮರುನ್ ಝಿತ್ತೊ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತ್ಯೆಚ್ಯಾ ಶಿಸಾಕ್ನಿ ತ್ಯೆಚ್ಯಾ ಹ್ಯಾ ಗೊಸ್ಟಿಯಾಂಚಿ ಯಾದ್ ಹೊತ್ತಿ, ಅನಿ ತೆನಿ ಪವಿತ್ರ್ ಪುಸ್ತಕಾ ವರ್ತಿ, ಅನಿ ಜೆಜುನ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:22
13 ತಿಳಿವುಗಳ ಹೋಲಿಕೆ  

ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.


ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು