Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:23 - ಕನ್ನಡ ಸತ್ಯವೇದವು C.L. Bible (BSI)

23 ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇವಿುನೊಳಗೆ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಜೆರುಜಲೆಮಾತ್ ಹೊತ್ತ್ಯಾ ತನ್ನಾ, ತೆನಿ ಕರಲ್ಲಿ ಅಜಾಪಾ ಬಗುನ್ ಲೈ ಲೊಕಾ ತೆಚೆ ವರ್ತಿ ವಿಶ್ವಾಸ್ ಕರುಕ್ ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:23
18 ತಿಳಿವುಗಳ ಹೋಲಿಕೆ  

ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು.


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು