Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:3 - ಕನ್ನಡ ಸತ್ಯವೇದವು C.L. Bible (BSI)

3 ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದ್ರಾಕ್ಷಾರಸವು ಸಾಲದೆ ಹೋಗಲಾಗಿ ಯೇಸುವಿನ ತಾಯಿ ಆತನಿಗೆ - ಅವರಲ್ಲಿ ದ್ರಾಕ್ಷಾರಸವಿಲ್ಲ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ವಾಯ್ನ್ ಸರಲ್ಲ್ಯಾ ತನ್ನಾ ಜೆಜುಚ್ಯಾ ಬಾಯ್ನ್ ಜೆಜುಕ್,“ತೆಂಚ್ಯಾಕ್ಲಿ ಸಗ್ಳಿ ವಾಯ್ನ್ ಸರ್ಲಿ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:3
8 ತಿಳಿವುಗಳ ಹೋಲಿಕೆ  

ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ.


ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು