Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:9 - ಕನ್ನಡ ಸತ್ಯವೇದವು C.L. Bible (BSI)

9 ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆ ಪಾನಿ ವಾಯ್ನ್ ಹೊಲ್ಲೆ ತ್ಯಾ ಮಾನ್ಸಾನ್ ತೆ ಚಾಟುನ್ ಬಗಟ್ಲ್ಯಾನ್, ಹೆ ವಾಯ್ನ್ ಖೈತ್ನಾ ಯೆಲ್ಲೆ ಮನುನ್ ತ್ಯಾ ಮಾನ್ಸಾಕ್ ಗೊತ್ತ್ ನತ್ತೆ .ಖರೆ ತೆ ಪಾನಿ ಕಾಡಲ್ಲ್ಯಾ ಆಳಾಕ್ನಿ ಗೊತ್ತ್ ಹೊತ್ತೆ, ತೆಚೆಸಾಟ್ನಿ ತೆನಿ ನ್ಹವ್ರ್ಯಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:9
6 ತಿಳಿವುಗಳ ಹೋಲಿಕೆ  

ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ.


ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು