Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತ್ಯಾ ದೆವ್‍ದುತಾನಿ, “ಬಾಯಿ, ತಿಯಾ ಕಶ್ಯಾಕ್ ರಡುಲಾಲೆ?” ಮನುನ್ ತಿಕಾ ಇಚಾರ್‍ಲ್ಯಾನಿ. ತನ್ನಾ ತೆನಿ “ತೆನಿ ಧನಿಯಾಕ್ ಘೆವ್ನ್ ಗೆಲ್ಯಾನಾತ್ ತೆಕಾ ತೆನಿ ಖೈ ಥವ್ಲ್ಯಾನಾತ್ ಮನುನ್ ಮಾಕಾ ಗೊತ್ತ್ ನಾ!” ಮನುನ್‍ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:13
13 ತಿಳಿವುಗಳ ಹೋಲಿಕೆ  

ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.


ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.


ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.


ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.


“ನೀವು ತರ್ಕಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು