Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:15 - ಕನ್ನಡ ಸತ್ಯವೇದವು C.L. Bible (BSI)

15 ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ? ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಲು, ಆಕೆಯು ಅವರು ತೋಟಗಾರನೆಂದು ನೆನಸಿ ಅವರಿಗೆ, “ಅಯ್ಯಾ, ನೀನು ಅವರನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಅವರನ್ನು ತೆಗೆದುಕೊಂಡು ಹೋಗುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುನ್ ತಿಕಾ, “ಬಾಯಿ, ತಿಯಾ ಕಶ್ಯಾಕ್ ರಡುಲಾಲೆ?” ಮಟ್ಲ್ಯಾನ್, ಅನಿ “ತಿಯಾ ಕೊನಾಕ್ ಹುಡ್ಕುಲೆ?” ಮನುನ್ ಇಚಾರ್‍ಲ್ಯಾನ್. ತೆನಿ ತೊ ತ್ಯಾ ಮಳ್ಯಾತ್ಲೊ ಕೊನ್ತರ್ ಅಶಿಲ್ ಮನುನ್ ಚಿಂತ್ಲಿನ್ ಅನಿ ತೆಕಾ, “ಸಾಯ್ಬಾ, ತಿಯಾ ತೆಕಾ ಘೆವ್ನ್ ಗೆಲೆ ಜಾಲ್ಯಾರ್, ತೆಕಾ ತಿಯಾ ಖೈ ಥವ್ಲೆ ಮನುನ್ ಮಾಕಾ ಸಾಂಗ್, ಮಿಯಾ ಜಾವ್ನ್ ತೆಕಾ ಘೆವ್ನ್ ಯೆತಾ” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:15
12 ತಿಳಿವುಗಳ ಹೋಲಿಕೆ  

ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.


ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು.


ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.


ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;


ಎದ್ದು ಊರೆಲ್ಲಾ ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ. ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.


ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು.


ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.


ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ :


ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು