Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:17 - ಕನ್ನಡ ಸತ್ಯವೇದವು C.L. Bible (BSI)

17 ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್ ತಿಕಾ, “ಮಾಕಾ ಧರುನ್ ಘೆವ್ನ್ ರಾವ್ನಕ್ಕೊ, ಮಿಯಾ ಅಜುನ್ ಮಾಜ್ಯಾ ಬಾಬಾಕ್ಡೆ ಫಾಟಿ ಪರ್ತುನ್ ಜಾವ್ಕ್ ನಾ, ಖರೆ ಜಾ ಅನಿ ಮಾಜ್ಯಾ ಭಾವಾಕ್ನಿ ಮಿಯಾ ಮಾಜ್ಯಾ ಬಾಬಾ ಅನಿ ತುಮ್ಚ್ಯಾ ಬಾಬಾಕ್ಡೆ, ಮಾಜ್ಯಾ ದೆವಾ ಅನಿ ತುಮ್ಚ್ಯಾ ದೆವಾಕ್ಡೆ ಪರ್ತುನ್ ಜಾವ್ಕ್ ಲಾಗ್ಲಾ ಮನುನ್ ಸಾಂಗ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:17
48 ತಿಳಿವುಗಳ ಹೋಲಿಕೆ  

ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಈಗ ಬೇಗನೆ ಹೋಗಿ, ಅವರ ಶಿಷ್ಯರಿಗೆ, ‘ಸತ್ತಿದ್ದವರು ಪುನರುತ್ಥಾನ ಹೊಂದಿದ್ದಾರೆ; ಅವರು ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು; ಅಲ್ಲೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ,” ಎಂದನು.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.


ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.


ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ," ಎಂದು ಹೇಳಿ ಕಳುಹಿಸಿದನು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು