Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:19 - ಕನ್ನಡ ಸತ್ಯವೇದವು C.L. Bible (BSI)

19 ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತ್ಯಾಚ್ ಆಯ್ತಾರ್‍ಚೆ ಸಾಂಚೆಕ್ಡೆ ಸಗ್ಳಿ ಶಿಸಾ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವ್ನ್, ದಾರಾ ಧಾಪುನ್ ಘೆವ್ನ್ ಭುತ್ತುರ್ ಬಸಲ್ಲಿ ಹೊತ್ತಿ ತನ್ನಾ ಜೆಜು ಯೆಲೊ, ಅನಿ ತೆಂಚ್ಯಾ ಮದ್ದಿ ಇಬೆ ರ್‍ಹಾಲೊ, ಅನಿ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:19
27 ತಿಳಿವುಗಳ ಹೋಲಿಕೆ  

ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ನಮ್ಮೆಲ್ಲರ ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಆಶೀರ್ವಾದವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.


ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II


ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:


ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು