Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:23 - ಕನ್ನಡ ಸತ್ಯವೇದವು C.L. Bible (BSI)

23 ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಯಾರ ಪಾಪಗಳನ್ನು ಕ್ಷವಿುಸಿಬಿಡುತ್ತೀರೋ ಅವರಿಗೆ ಅವುಗಳ ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ಕ್ಷವಿುಸದೆ ಉಳಿಸುತ್ತೀರೋ ಅವರಿಗೆ ಅವುಗಳು ಉಳಿಯುತ್ತವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ, ಅವರ ಪಾಪಗಳನ್ನು ಕ್ಷಮಿಸಲಾಗುವುದು. ನೀವು ಯಾರ ಪಾಪಗಳನ್ನು ಕ್ಷಮಿಸುವುದಿಲ್ಲವೋ, ಅವರ ಪಾಪಗಳಿಗೆ ಕ್ಷಮೆ ದೊರೆಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲಾಗುವುದು ಮತ್ತು ಯಾರ ಪಾಪಗಳನ್ನು ನೀವು ಉಳಿಸುತ್ತೀರೋ ಅವು ಅವರಿಗೆ ಉಳಿಸಲಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಲೊಕಾಂಚಿ ಪಾಪಾ ಮಾಪ್ ಕರ್ಲ್ಯಾರ್ ತಿ ಮಾಪ್ ಕರುನ್ ಹೊತ್ಯಾತ್, ತುಮಿ ತಿ ಮಾಪ್ ಕರಿನಸ್ಲ್ಯಾರ್ ತಿ ಮಾಪ್ ಕರುನ್ ಹೊಯ್‍ನ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:23
11 ತಿಳಿವುಗಳ ಹೋಲಿಕೆ  

“ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು