Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:27 - ಕನ್ನಡ ಸತ್ಯವೇದವು C.L. Bible (BSI)

27 ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ತೆನಿ ಥೊಮಸಾಕ್, “ಥೊಮಾಸಾ ಯೆ ಅನಿ ಮಾಜ್ಯಾ ಹಾತಾತ್ನಿ ತುಜೊ ಬೊಟ್ ಘಾಲುನ್ ಬಗ್, ಮಾನಾ ತುಜೊ ಹಾತ್ ಲಾಂಬ್ ಕರುನ್ ಮಾಜ್ಯಾ ಪಕ್ಡಿತ್ ಘಾಲುನ್ ಬಗ್, ಸಂಶೆವ್ ಕರ್‍ತಲೆ ಸೊಡ್, ಅನಿ ವಿಶ್ವಾಸ್ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:27
13 ತಿಳಿವುಗಳ ಹೋಲಿಕೆ  

ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.


“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು).


ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. (


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು