Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:16 - ಕನ್ನಡ ಸತ್ಯವೇದವು C.L. Bible (BSI)

16 ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ತಿರಿಗಿ ಎರಡನೆಯ ಸಾರಿ ಅವನನ್ನು - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಗಳನ್ನು ಕಾಯಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ಹೌದು ಕರ್ತನೇ, ನಾನು ನಿಮ್ಮ ಮೇಲೆ ಮಮತೆ ಇಟ್ಟಿದ್ದೇನೆಂದು ನೀವೇ ಬಲ್ಲಿರಿ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಗಳನ್ನು ರಕ್ಷಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಎಕ್ ಉಲ್ಲೊ ಎಳ್ ಹೊಲ್ಲ್ಯಾ ತನ್ನಾ, ಜೆಜುನ್ ಪೆದ್ರುಕ್, “ಸಿಮಾವ್ ಜುವಾಂವಾಚ್ಯಾ ಲೆಕಾ ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ತನ್ನಾ ತೆನಿ, “ಹೊಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್” ಮನುನ್ ಜಬಾಬ್ ದಿಲ್ಯಾನ್. ಜೆಜುನ್ ತೆಕಾ, “ಮಾಜ್ಯಾ ಬಕ್ರ್ಯಾಕ್ನಿ ಬಗುನ್ ಘೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:16
18 ತಿಳಿವುಗಳ ಹೋಲಿಕೆ  

ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.


ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನೊಮ್ಮೆ ನಿರಾಕರಿಸಿದನು.


ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು