Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:19 - ಕನ್ನಡ ಸತ್ಯವೇದವು C.L. Bible (BSI)

19 ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 (ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆ ಸಾಂಗುನ್ ಜೆಜುನ್ ಪೆದ್ರು ದೆವಾಚ್ಯಾ ನಾವಾಕ್ ಮಹಿಮಾ ಹಾನುಕ್ ಮನುನ್ ಕಸ್ಲೆ ಮರಾನ್ ಮರ್‍ತಲೊ ಹಾಯ್ ಮನುನ್ ದಾಕ್ವುನ್ ದಿಲ್ಯಾನ್. ಮಾನಾ ಜೆಜುನ್ ತೆಕಾ,“ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:19
17 ತಿಳಿವುಗಳ ಹೋಲಿಕೆ  

ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.


ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.


ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಈ ಮಾತಿನಿಂದ ತಮಗೆಂಥ ಮರಣ ಕಾದಿದೆಯೆಂದು ಸೂಚಿಸಿದರು.


ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.


ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು