Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:23 - ಕನ್ನಡ ಸತ್ಯವೇದವು C.L. Bible (BSI)

23 ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಅಶೆ ಹೊವ್ನ್ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾಂಚ್ಯಾ ಮದ್ದಿ ಹ್ಯೊ ಶಿಸ್ ಮರುಚೆ ನೈಯ್‍ ಮನ್ತಲಿ ಖಬರ್ ಉಟ್ಲಿ”. ಖರೆ ತೊ ಮರ್‍ತಲೆ ನಕ್ಕೊ ಮನುನ್ ಜೆಜುನ್ ಸಾಂಗುಕ್‍ನಾ. ತೆನಿ, “ಮಿಯಾ ಯೆಯ್ ಪತರ್ ಜರ್ ತರ್ ತೊ ಝಿತ್ತೊ ರ್‍ಹಾವ್ಕ್ ಪಾಜೆ ಮನುನ್ ಮಾಕಾ ಪಾಜೆ ಹೊಲ್ಯಾರ್, ತುಕಾ ಕಶ್ಯಾಕ್ ಪಾಜೆ ತೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:23
12 ತಿಳಿವುಗಳ ಹೋಲಿಕೆ  

ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ನಾನು ಬರುವವರೆಗೆ ನೀವು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿದ್ದರೆ ಅಷ್ಟೇ ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು