Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ ಸೀಮೋನ ಪೇತ್ರನು - ನಾನು ಮೀನು ಹಿಡಿಯುವದಕ್ಕೆ ಹೋಗುತ್ತೇನೆಂದು ಹೇಳಲು ಅವರು - ನಾವೂ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಒಂದು ಮೀನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸಿಮಾವ್ ಪೆದ್ರುನ್ ಹುರಲ್ಲ್ಯಾಕ್ನಿ“ಮಿಯಾ ಮಾಸೊಳ್ಯಾ ಧರುಕ್ ಜಾವ್ಕ್ ಲಾಗ್ಲಾ” ಮಟ್ಲ್ಯಾನ್. ತನ್ನಾ ತೆನಿ “ಅಮಿಬಿ ತುಜ್ಯಾ ವಾಂಗ್ಡಾ ಯೆತಾಂವ್” ಮಟ್ಲ್ಯಾನಿ. ತಸೆಮನುನ್ ತೆನಿ ಢೊನ್ ಘೆವ್ನ್ ಗೆಲ್ಯಾನಿ, ಖರೆ ಸಗ್ಳಿ ರಾತ್ಬರ್ ತೆಂಕಾ ಎಕ್ ಸೈತ್ ಮಾಸೊಳಿ ಗಾವುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:3
11 ತಿಳಿವುಗಳ ಹೋಲಿಕೆ  

ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ಜೀವನೋಪಾಯಕ್ಕಾಗಿ ಬಾರ್ನಬ ಮತ್ತು ನಾನು ಮಾತ್ರ ದುಡಿಯಬೇಕೇ?


ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು