Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆಜುಚ್ಯಾ ತ್ಯಾ ಪ್ರೆಮಾಚ್ಯಾ ಶಿಸಾನ್ ಸಿಮಾವ್ ಪೆದ್ರುಕ್ “ಧನಿ ತೊ!” ಮಟ್ಲ್ಯಾನ್, ತೊ ಧನಿ ಮನುನ್ ಆಯ್ಕಲ್ಲ್ಯಾ ತನ್ನಾ ಪೆದ್ರುನ್ ಅಪ್ನಾಚೆ ಕಪ್ಡೆ ನೆಸುನ್ ಘೆಟ್ಲ್ಯಾನ್, ಅನಿ ಪಾನಿಯಾತ್ ಹುಡಿ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:7
20 ತಿಳಿವುಗಳ ಹೋಲಿಕೆ  

ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,


ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.


ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.


ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು :


ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II


ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.


“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.


ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು