Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:12 - ಕನ್ನಡ ಸತ್ಯವೇದವು C.L. Bible (BSI)

12 ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಭೂಲೋಕದಲ್ಲಿ ನಡೆಯುವ ಕಾರ್ಯಗಳನ್ನು ಕುರಿತು ನಿಮಗೆ ಹೇಳುವಾಗ ನೀವು ನಂಬದೆಹೋದರೆ ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಜಗಾತ್ಲ್ಯಾ ಗೊಸ್ಟಿಯಾಚ್ಯಾ ಬದಲ್ ಮಿಯಾ ಬೊಲ್ತಾನಾಚ್ ತುಮಿ ವಿಶ್ವಾಸ್ ಕರಿನ್ಯಾಸಿ, ಅನಿ ಮಿಯಾ ತುಮ್ಕಾ ಸರ್ಗಾಚ್ಯಾ ಗೊಸ್ಟಿಯಾಚ್ಯಾ ವಿಶಯಾತ್ ಸಾಂಗಟ್ಲ್ಯಾರ್ ತುಮಿ ಕಶೆ ವಿಶ್ವಾಸ್ ಕರ್‍ತ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:12
13 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.


ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು