Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:17 - ಕನ್ನಡ ಸತ್ಯವೇದವು C.L. Bible (BSI)

17 ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾನ್ ಅಪ್ನಾಚ್ಯಾ ಲೆಕಾಕ್ ಹ್ಯಾ ಜಗಾತ್ ಇಚಾರ್‍ನಿ ಕರುಕ್ ಮನುನ್ ಧಾಡುನ್ ದಿವ್ಕ್ ನಾ ಜಗಾಚೊ ರಾಕನ್ದಾರ್ ಹೊವ್‍ಸಾಟಿ ಮನುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:17
36 ತಿಳಿವುಗಳ ಹೋಲಿಕೆ  

ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”


ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು