Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:19 - ಕನ್ನಡ ಸತ್ಯವೇದವು C.L. Bible (BSI)

19 ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೊ ನ್ಯಾಯಾಚೊ ನಿರ್‍ನಯ್ ಅಸೊ ಹೊತಾ; ಜಗಾತ್ ಉಜ್ವೊಡ್ ಯೆಲೊ ಖರೆ ಲೊಕಾನಿ ಉಜ್ವೊಡಾಚ್ಯಾನ್ಕಿ ಕಾಳ್ಕಾಚೊ ಲೈ ಪ್ರೆಮ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಕಾಮಾಚ್ ಬುರ್ಶಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:19
33 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.


ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಉಷ್ಟ್ರಪಕ್ಷಿ, ಉಲೂಕ, ಕಡಲ ಹಕ್ಕಿ,


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ


ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು