Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಎಕ್ ದಿಸ್ ರಾಚ್ಚೆ ನಿಕೊದೆಮ್ ಜೆಜುಕ್ಡೆ ಗೆಲೊ, ಅನಿ ಜೆಜುಕ್, “ರಬ್ಬಿ ತಿಯಾ ದೆವಾನ್ ಧಾಡುನ್ ದಿಲ್ಲೊ ಎಕ್ ಗುರುಜಿ ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಫಾಟಿರ್ ರ್‍ಹಾಲ್ಯಾ ಶಿವಾಯ್ ಕೊನಾಕ್ಬಿ ತಿಯಾ ಕರ್‍ತೆ ತಸ್ಲಿ ಅಜಾಪಾ ಕರುಕ್ ಹೊಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:2
30 ತಿಳಿವುಗಳ ಹೋಲಿಕೆ  

ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.


ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು