Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:21 - ಕನ್ನಡ ಸತ್ಯವೇದವು C.L. Bible (BSI)

21 ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ತನ್ನ ಕೃತ್ಯಗಳನ್ನು ಮಾಡಿದ್ದೇನೆಂದು ತೋರಿಬರುವಂತೆ ಬೆಳಕಿಗೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಜೆ ಕೊನ್ ಖರೆ ಹಾಯ್ ತೊ ಉಜ್ವೊಡಾಕ್ಡೆ ಯೆತಾ. ಅನಿ ಅಶೆ ಉಜ್ವೊಡಾಕ್ ದಿಸುನ್ ಯಂವ್ದಿತ್ ತಸೆ ತೆಚಿ ಕಾಮಾ ದೆವಾನ್ ಕರ್‍ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:21
31 ತಿಳಿವುಗಳ ಹೋಲಿಕೆ  

ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು