Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:27 - ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೋಹಾನನು - ಪರಲೋಕದಿಂದ ಅನುಗ್ರಹಿಸೋಣವಾದದ್ದನ್ನೇ ಹೊರತು ಮನುಷ್ಯನು ಹೆಚ್ಚೇನು ಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜುವಾಂವಾಕ್ ಜವಾಬ್ ದಿಲ್ಲ್ಯಾನ್, “ದೆವಾನ್ ದಿಲ್ಯಾ ಶಿವಾಯ್ ಕೊನಾಕ್ಬಿ ಕಾಯ್ಬಿ ಗಾವಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:27
27 ತಿಳಿವುಗಳ ಹೋಲಿಕೆ  

ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.


ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು