ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.
ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.
ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.
ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.
ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.
ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.