Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:35 - ಕನ್ನಡ ಸತ್ಯವೇದವು C.L. Bible (BSI)

35 ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಬಾಬಾ ಅಪ್ನಾಚ್ಯಾ ಲೆಕಾಚೊ ಪ್ರೆಮ್ ಕರ್‍ತಾ, ಅನಿ ತೆಂಕಾ ಸಗ್ಳ್ಯಾ ವರ್ತಿ ಅದಿಕಾರ್ ದಿಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:35
25 ತಿಳಿವುಗಳ ಹೋಲಿಕೆ  

ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.


ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ನಾನು ಆತನ ಬಳಿ ಕುಶಲ ಶಿಲ್ಪಿಯಂತಿದ್ದೆ ಅನುದಿನವೂ ಆತನಿಗೆ ಆನಂದವನ್ನೀಯುತ್ತಿದ್ದೆ ಸದಾ ಆತನ ಮುಂದೆ ಸಂತೋಷಪಡುತ್ತಿದ್ದೆ.


ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, “ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ,” ಎಂದು ಉತ್ತರಕೊಟ್ಟನು.


ಅಷ್ಟು ಮಾತ್ರವಲ್ಲ, ಫರೋಹನು ಅವನಿಗೆ, “ಫರೋಹನಾದ ನಾನು ಹೇಳುತ್ತಿದ್ದೇನೆ: ನಿನ್ನ ಅಪ್ಪಣೆಯಿಲ್ಲದೆ ಇಡೀ ಈಜಿಪ್ಟ್ ದೇಶದಲ್ಲಿ ಯಾರೂ ಏನನ್ನೂ ಮಾಡಕೂಡದು,” ಎಂದು ಹೇಳಿದನು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು