Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:36 - ಕನ್ನಡ ಸತ್ಯವೇದವು C.L. Bible (BSI)

36 ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೊ ಕೊನ್ ಲೆಕಾಚ್ಯಾ ವರ್ತಿ ವಿಶ್ವಾಸ್ ಕರ್‍ತಾ ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ; ಜೆ ಕೊನ್ ಲೆಕಾಚಿ ಆಜ್ಞಾ ಮಾನಿನಾತ್, ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವಿನಾ, ತೆನಿ ದೆವಾಚ್ಯಾ ರಾಗಾತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:36
38 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು