Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:5 - ಕನ್ನಡ ಸತ್ಯವೇದವು C.L. Bible (BSI)

5 ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆಜುನ್, “ಮಿಯಾ ತುಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಪಾನಿಯಾನ್, ಅನಿ ಪವಿತ್ರ್ ಆತ್ಮ್ಯಾನ್ ಅನಿ ಪರ್ತುನ್ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚ್ಯಾ ರಾಜಾತ್ ಭುತ್ತುರ್ ಜಾವ್ಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:5
35 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು