Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:6 - ಕನ್ನಡ ಸತ್ಯವೇದವು C.L. Bible (BSI)

6 ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇಹದಿಂದ ಹುಟ್ಟಿದ್ದು ದೇಹವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎಕ್ ಮಾನುಸ್ ಆಂಗಾ-ಮಾಸಾನಿ ಮಾನ್ಸಾಚ್ಯಾ ಪೊಟಾನ್ ಉಪಜ್ತಾ, ಖರೆ ಅತ್ಮಿಕ್ ರಿತಿನ್ ತೊ ಆತ್ಮ್ಯಾಚ್ಯಾ ವೈನಾ ಉಪಜ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:6
25 ತಿಳಿವುಗಳ ಹೋಲಿಕೆ  

ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.


ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.


ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು