Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:7 - ಕನ್ನಡ ಸತ್ಯವೇದವು C.L. Bible (BSI)

7 ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಹೊಸದಾಗಿ ಹುಟ್ಟಬೇಕು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ನೀನು ಹೊಸದಾಗಿ ಹುಟ್ಟಲೇಬೇಕು’ ಎಂದು ನಾನು ಹೇಳಿದ್ದಕ್ಕೆ ಆಶ್ಚರ್ಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿಯಾ, ಅನಿ ಎಗ್ದಾ ಉಪ್ಜುಕ್ ಜಾಯ್ ಮನುನ್ ಮಿಯಾ ಮಟ್ಲೊ ಮನುನ್ ತಿಯಾ ಗಡ್ಬಡುನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:7
17 ತಿಳಿವುಗಳ ಹೋಲಿಕೆ  

ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು