Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:8 - ಕನ್ನಡ ಸತ್ಯವೇದವು C.L. Bible (BSI)

8 ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ವಾರೊ ಅಪ್ನಾಕ್ ಕಶೆ ಪಾಜೆ ತಶೆ ಖೆಳ್ತಾ ತೆಚೊ ಅವಾಜ್ ಎವ್ಡೊಚ್ ತುಕಾ ಆಯ್ಕೊ ಯೆತಾ, ಖರೆ ತೊ ಖೈತ್ನಾ ಯೆವ್ಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ತುಕಾ ಗೊತ್ತ್ ರ್‍ಹಾಯ್ನಾ ಅಸೆಚ್ ಸಗ್ಳಿ ಲೊಕಾ ಆತ್ಮ್ಯಾಚ್ಯಾ ವೈನಾ ಉಪಜ್ತಾತ್‍. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:8
21 ತಿಳಿವುಗಳ ಹೋಲಿಕೆ  

ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.


ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.


ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.


ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ.


ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು