Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:1 - ಕನ್ನಡ ಸತ್ಯವೇದವು C.L. Bible (BSI)

1 ಯೊವಾನ್ನನಿಗಿಂತಲೂ ಯೇಸು ಸ್ವಾಮಿಯೇ ಹೆಚ್ಚುಮಂದಿ ಜನರನ್ನು ಶಿಷ್ಯರನ್ನಾಗಿಸಿಕೊಳ್ಳುತ್ತಾ, ಅವರಿಗೆ ದೀಕ್ಷಾಸ್ನಾನವನ್ನು ಮಾಡಿಸುತ್ತಾ ಇದ್ದಾರೆಂಬ ವಾರ್ತೆ ಫರಿಸಾಯರ ಕಿವಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಜುವಾಂವಾಚ್ಯಾನ್ಕಿ ಜಾಸ್ತಿ ಶಿಸಾ ಕರುಕ್ ಲಾಗ್ಲಾ, ಅನಿ ಬಾಲ್ತಿಮ್ ದಿವ್ಲಾ, ಮನುನ್ ಫಾರಿಜೆವಾನಿ ಆಯಿಕ್ಲ್ಯಾನಿ. ಹೆ ಜೆಜುಕ್ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:1
15 ತಿಳಿವುಗಳ ಹೋಲಿಕೆ  

ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು.


ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ’ ಎನ್ನಿರಿ,” ಎಂದು ಹೇಳಿ ಕಳುಹಿಸಿದರು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು