Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ ತಿಕಾ “ದೆವ್ ಕಾಯ್ ದಿತಾ, ಅನಿ ಫಿವ್ಕ್ ಉಲ್ಲೆ ಪಾನಿ ದಿ ಮನುನ್ ತುಜೆಕ್ಡೆ ಮಾಗ್ತಲೊ ಕೊನ್ ಮನುನ್ ತುಕಾ ಗೊತ್ತ್ ರ್‍ಹಾಲ್ಯಾರ್, ತಿಯಾಚ್ ತೆಚೆಕ್ಡೆ ಮಾಗಿ ಹೊತ್ತೆ, ಅನಿ ತೊ ತುಕಾ ಜಿವ್‍ದಿತಲೆ ಪಾನಿ ದಿ ಹೊತ್ತೊ” ಮನುನ್ ಜಬಾಬ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:10
49 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.


ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ನಿನ್ನ ತೋಟಗಳಿಗೆ ಬೇಕಾದ ಬುಗ್ಗೆ, ಉಕ್ಕಿಬರುವ ಒರತೆ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ ನಲ್ಲೆ :


ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು