Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:14 - ಕನ್ನಡ ಸತ್ಯವೇದವು C.L. Bible (BSI)

14 ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮಿಯಾ ದಿಲ್ಲೆ ಪಾನಿ ಜೆ ಕೊನ್ ಫಿತಾ, ತೆಕಾ ಕನ್ನಾಬಿ ಅನಿ ಪರ್ತುನ್ ಸೊಸ್‍ಲಾಗಿನಾ. ಮಿಯಾ ದಿಲ್ಲೆ ಪಾನಿ ದಿತಲೆ ಪಾನಿ ಭುತ್ತುರ್ ಎಕ್ ಝರೊ ಸರ್ಕೆ ತೆಂಕಾ ಜಿವ್ ದಿತಲೆ ಪಾನಿ ದಿವ್ನಗೆತುಚ್ ರ್‍ಹಾತಾ, ಅನಿ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:14
32 ತಿಳಿವುಗಳ ಹೋಲಿಕೆ  

ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?


ಆಗ ಯೇಸು, “ಈ ನೀರನ್ನು ಕುಡಿಯುವ ಎಲ್ಲರಿಗೂ ಮತ್ತೆ ದಾಹವಾಗುತ್ತದೆ.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು