Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:18 - ಕನ್ನಡ ಸತ್ಯವೇದವು C.L. Bible (BSI)

18 “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನಗೆ ಐದುಮಂದಿ ಗಂಡಂದಿರಿದ್ದರು, ಈಗ ಇರುವವನು ನಿನಗೆ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಿಕಾ ಪಾಂಚ್ ಜಾನಾಕ್ನಿ ಲಗಿನ್ ಹೊಲಿ, ಅನಿ ಅತ್ತಾ ತಿಯಾ ಕೊನಾಚ್ಯಾ ವಾಂಗ್ಡಾ ಹಾಸ್ ತೊ ತುಜೊ ಖರೊ ಘೊವ್ ನ್ಹಯ್ ತಿಯಾ ಮಾಕಾ ಖರೆ ಹೊತ್ತೆ ಸಾಂಗಟ್ಲೆಯ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:18
16 ತಿಳಿವುಗಳ ಹೋಲಿಕೆ  

“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು.


ಪತಿ ಬದುಕಿರುವಾಗಲೇ ಸತಿಯು ಇನ್ನೊಬ್ಬನೊಡನೆ ಸಂಬಂಧ ಬೆಳೆಸಿದರೆ ಆಕೆ ವ್ಯಭಿಚಾರಿಣಿ ಎನಿಸಿಕೊಳ್ಳುತ್ತಾಳೆ. ಪತಿಯು ಸತ್ತುಹೋದರೆ ಆಕೆ ವಿವಾಹಬಂಧನದಿಂದ ಮುಕ್ತಳು. ಅಂಥವಳು ಇನ್ನೊಬ್ಬನನ್ನು ಮದುವೆ ಆದರೂ ವ್ಯಭಿಚಾರಿಣಿ ಎನಿಸಿಕೊಳ್ಳುವುದಿಲ್ಲ.


ನೀನು ಸೂಳೆತನಮಾಡುವ ಪತಿವ್ರತೆ; ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!


ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು.


ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ


ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?" ಎಂದು ಪ್ರಶ್ನಿಸಿದರು.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಆಕೆ, “ನನಗೆ ಗಂಡನಿಲ್ಲ,” ಎಂದಳು.


ಅದಕ್ಕೆ ಆ ಮಹಿಳೆ, “ಸ್ವಾಮೀ, ತಾವು ಪ್ರವಾದಿ ಎಂದು ನನಗೀಗ ತಿಳಿಯಿತು.


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಅದಕ್ಕೆ ಯೇಸು, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು