Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:2 - ಕನ್ನಡ ಸತ್ಯವೇದವು C.L. Bible (BSI)

2 (ವಾಸ್ತವವಾಗಿ ದೀಕ್ಷಾಸ್ನಾನವನ್ನು ಮಾಡಿಸುತ್ತಿದ್ದವರು ಯೇಸುವಿನ ಶಿಷ್ಯರೇ ಹೊರತು ಯೇಸುವಲ್ಲ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಆತನು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೋದನು. (ಆದರೂ ಸ್ನಾನ ಮಾಡಿಸುತ್ತಿದ್ದವನು ಯೇಸುವಲ್ಲ; ಆತನ ಶಿಷ್ಯರೇ ಮಾಡಿಸುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 (ವಾಸ್ತವವಾಗಿ ಜನರಿಗೆ ದೀಕ್ಷಾಸ್ನಾನ ಕೊಟ್ಟದ್ದು ಯೇಸುವಲ್ಲ. ಆತನ ಶಿಷ್ಯರೇ ಜನರಿಗೆ ದೀಕ್ಷಾಸ್ನಾನ ಮಾಡಿಸಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಯೇಸು ತಾವೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಅವರ ಶಿಷ್ಯರು ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಮಟ್ಲ್ಯಾರ್, ಜೆಜುನ್ ಅಪ್ನಿ ಕೊನಾಕ್ಬಿ ಬಾಲ್ತಿಮ್ ದಿವ್ಕ್ ನಾ ತ್ಯೆಚ್ಯಾ ಶಿಸಾನಿ ಬಾಲ್ತಿಮ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:2
5 ತಿಳಿವುಗಳ ಹೋಲಿಕೆ  

ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು