Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತಿಕಾ, “ಮಾಜೆ ವರ್ತಿ ವಿಶ್ವಾಸ್ ಕರ್, ಎಕ್ ಎಳ್ ಯೆತಾ ತನ್ನಾ ಲೊಕಾ ಮಡ್ಡಿ ವರ್ತಿ ಹೊಂವ್ದಿ, ಜೆರುಜಲೆಮಾತ್ ಹೊಂವ್ದಿತ್ ದೆವಾ ಬಾಬಾಚೆ ಆರಾದಾನ್ ಕರಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:21
20 ತಿಳಿವುಗಳ ಹೋಲಿಕೆ  

ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು