Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:22 - ಕನ್ನಡ ಸತ್ಯವೇದವು C.L. Bible (BSI)

22 ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಆದದರಿಂದ ನಾವು ಅರಿತಿರುವದನ್ನೇ ಆರಾಧಿಸುವವರಾಗಿದ್ದೇವೆ; ನೀವು ಅರಿಯದೆ ಇರುವಂಥದನ್ನು ಆರಾಧಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತುಮ್ಕಾ ಸಮಾರಿಯಾಚ್ಯಾ ಲೊಕಾಕ್ನಿ ತುಮಿ ಕೊನಾಚಿ ಆರಾದಾನ್ ಕರುಕ್ ಲಾಗ್ಲ್ಯಾಶಿ ಮನುನ್ ಗೊತ್ತ್ ನಾ; ಖರೆ ಅಮ್ಕಾ ಜುದೆವಾಕ್ನಿ ಅಮಿ ಕೊನಾಚಿ ಆರಾದಾನ್ ಕರುಲಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ಸುಟ್ಕಾ ಜುದೆವ್ ಲೊಕಾನಿತ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:22
20 ತಿಳಿವುಗಳ ಹೋಲಿಕೆ  

ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಹೀಗಿರಲಾಗಿ, ಕಡಿದುಹಾಕಿದ ರೆಂಬೆಗಳಂತಿರುವ ಇಸ್ರಯೇಲರನ್ನು ಕಡೆಗಣಿಸುತ್ತಾ ಹೆಮ್ಮೆಪಡಬೇಡ. ಹೆಮ್ಮೆಪಟ್ಟರೂ ನೀನು ಕೇವಲ ರೆಂಬೆ ಮಾತ್ರ. ಬೇರಿಗೆ ಆಧಾರ ನೀನಲ್ಲ. ನಿನಗೆ ಆಧಾರ ಬೇರು ಎಂಬುದನ್ನು ನೆನಪಿನಲ್ಲಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು