Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:24 - ಕನ್ನಡ ಸತ್ಯವೇದವು C.L. Bible (BSI)

24 ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವ್ ಮಟ್ಲ್ಯಾರ್ ಆತ್ಮೊ, ಅನಿ ಖಾಲಿ ತೆಚ್ಯಾ ಆತ್ಮ್ಯಾಚ್ಯಾ ಬಳಾನ್ ಎವ್ಡೆಚ್ ತೊ ಕಸೊ ಹಾಯ್ ತಶೆ ತೆಚೆ ಖರೆಪಾನಾನ್ ಆರಾದಾನ್ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:24
13 ತಿಳಿವುಗಳ ಹೋಲಿಕೆ  

ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು