Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:25 - ಕನ್ನಡ ಸತ್ಯವೇದವು C.L. Bible (BSI)

25 ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಹೆಂಗಸು ಆತನಿಗೆ - ಮೆಸ್ಸೀಯನು ಅಂದರೆ ಕ್ರಿಸ್ತನು ಬರುತ್ತಾನೆಂದು ಬಲ್ಲೆನು; ಆತನು ಬಂದ ಮೇಲೆ ನಮಗೆ ಎಲ್ಲಾ ತಿಳಿಸುವನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಬಾಯ್ಕೊಮನ್ಸಿನ್ ತೆಕಾ, “ಮೆಸ್ಸಿಯಾ ಯೆತಲೊ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್, ಅನಿ ತೊ ಯೆಲ್ಲ್ಯಾ ತನ್ನಾ ಸಗ್ಳೆ ಅಮ್ಕಾ ಸಾಂಗ್ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:25
11 ತಿಳಿವುಗಳ ಹೋಲಿಕೆ  

ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.


ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;


‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.


ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?’ ಎಂದು ಕೇಳಿದನು.


“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು