Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:31 - ಕನ್ನಡ ಸತ್ಯವೇದವು C.L. Bible (BSI)

31 ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಷ್ಟರೊಳಗೆ ಶಿಷ್ಯರು - ಗುರುವೇ, ಊಟಮಾಡು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾಚ್ ಶಿಸಾಬಿ ಜೆಜುಕ್, “ಗುರುಜಿ ಕಾಯ್ ತರ್ ಉಲ್ಲೆ ಖಾವಾ!” ಮನುನ್ ಲೈ ಸಾಂಗುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:31
18 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ಅನಂತರ ಊಟ ಬಡಿಸಲಾಯಿತು. ಆದರೆ ಆ ಮನುಷ್ಯ, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ,” ಎಂದುಬಿಟ್ಟನು. ಆಗ ಲಾಬಾನನು, “ಅದೇನು ಹೇಳು,” ಎಂದನು.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು.


ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.


ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಅವರು ಯೇಸುವಿನ ಬಳಿಗೆ ಬಂದರು.


ಆಗ ಯೇಸು, “ನಿಮಗೆ ತಿಳಿಯದಂಥ ಆಹಾರ ನನ್ನಲ್ಲಿದೆ,” ಎಂದರು.


ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.


ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.


ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು