Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:32 - ಕನ್ನಡ ಸತ್ಯವೇದವು C.L. Bible (BSI)

32 ಆಗ ಯೇಸು, “ನಿಮಗೆ ತಿಳಿಯದಂಥ ಆಹಾರ ನನ್ನಲ್ಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ಆತನು ಅವರಿಗೆ - ನಿಮಗೆ ತಿಳಿಯದಂಥ ಆಹಾರವು ನನಗುಂಟು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದಕ್ಕೆ ಯೇಸು, “ನನ್ನಲ್ಲಿ ಆಹಾರವಿದೆ. ಆ ಆಹಾರದ ಬಗ್ಗೆ ನಿಮಗೇನೂ ಗೊತ್ತಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಯೇಸು ಅವರಿಗೆ, “ನಿಮಗೆ ತಿಳಿಯದಿರುವ ಆಹಾರವು ನನ್ನಲ್ಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ತೆನಿ ತೆಂಕಾ, “ಮಾಜಾಕ್ಡೆ ಜೆವಾನ್ ಹಾಯ್ ತ್ಯೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:32
13 ತಿಳಿವುಗಳ ಹೋಲಿಕೆ  

ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಬಾಯಿ ಬಿತ್ತಿದ ಬೆಳೆಯಿಂದ ಮನುಷ್ಯ ಹೊಟ್ಟೆ ತುಂಬುವನು; ತುಟಿಗಳು ಕೊಟ್ಟ ಫಲದಿಂದ ತಿಂದು ತೇಗುವನು.


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು