ಯೋಹಾನ 4:35 - ಕನ್ನಡ ಸತ್ಯವೇದವು C.L. Bible (BSI)35 ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇನ್ನು ನಾಲ್ಕು ತಿಂಗಳಿಗೆ ಸುಗ್ಗಿಬರುವದೆಂದು ನೀವು ಹೇಳುವದುಂಟಷ್ಟೆ. ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ; ಅವು ಬೆಳ್ಳಗಾಗಿ ಕೊಯ್ಲಿಗೆ ಬಂದವೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತುಮ್ಚಿ ಎಕ್ ಸಾಂಗ್ನಿ ಹಾಯ್, “ಅನಿ ಚಾರ್ ಮ್ಹಯಿನೆ ಎವ್ಡೆಚ್ ಸುಗ್ಗಿ ಯೆಲಿ” ಮನುನ್ ಖರೆ ಮಿಯಾ ತುಮ್ಕಾ ಸಾಂಗ್ತಾ ಶೆತಾತ್ನಿ ಬರೆ ಕರುನ್ ಎಕ್ ನದರ್ ಘಾಲುನ್ ಬಗಾ; ಕನ್ಸಾ ಸಗ್ಳಿ ಪಿಕುನ್ ಕಾತ್ರುಕ್ ತಯಾರ್ ಹೊವ್ನ್ ಹಾತ್! ಅಧ್ಯಾಯವನ್ನು ನೋಡಿ |