Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:38 - ಕನ್ನಡ ಸತ್ಯವೇದವು C.L. Bible (BSI)

38 ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನೀವು ಪ್ರಯಾಸ ಪಡದಂಥದ್ದನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಇತರರು ಪ್ರಯಾಸಪಟ್ಟರು. ನೀವು ಅವರ ಪ್ರಯಾಸದ ಫಲವನ್ನು ಪಡೆದಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಿಯಾ ಕಾಮ್ ಕರಿನಸಲ್ಲ್ಯಾ ಶೆತಾತ್ನಿ ಮಿಯಾ ತುಕಾ ಪಿಕ್ ಕಾತ್ರುಕ್ ಧಾಡ್ತಾ; ಥೈ ದುಸ್ರ್ಯಾನಿ ರಾಬ್ಲ್ಯಾನಾತ್ ಖರೆ ತೆಚೊ ಫಾಯ್ದೊ ತುಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:38
20 ತಿಳಿವುಗಳ ಹೋಲಿಕೆ  

ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು.


‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ಇತರರ ಪ್ರಯಾಸದ ಫಲಗಳನ್ನು ನಮ್ಮದೆಂದುಕೊಂಡು ಎಲ್ಲೆಮೀರಿ ನಾವು ಹೊಗಳಿಕೊಳ್ಳುತ್ತಿಲ್ಲ. ಆದರೆ ನಿಮ್ಮ ವಿಶ್ವಾಸ ವೃದ್ಧಿಯಾದಂತೆಲ್ಲಾ ನಮ್ಮ ಕಾರ್ಯಕ್ಷೇತ್ರ ಇನ್ನೂ ವಿಸ್ತಾರವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು