Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:40 - ಕನ್ನಡ ಸತ್ಯವೇದವು C.L. Bible (BSI)

40 ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದ್ದರಿಂದ ಆ ಸಮಾರ್ಯರು ಆತನ ಬಳಿಗೆ ಬಂದು - ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅವರಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತೆಚೆಸಾಟ್ನಿ ತ್ಯಾ ಸಮಾರಿಯಾಚ್ಯಾ ಲೊಕಾನಿ ಜೆಜುಕ್ಡೆ “ತಿಯಾ ಅಮ್ಚ್ಯಾ ವಾಂಗ್ಡಾ ರ್‍ಹಾ” ಮನುನ್ ಲೈ ಮಾಗ್ಲ್ಯಾನಿ ತನ್ನಾ ಜೆಜು ದೊನ್ ದಿಸ್ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:40
15 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.


ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.


ಇನ್ನೂ ಅನೇಕರಿಗೆ ಯೇಸುವಿನ ಬೋಧನೆಯನ್ನು ಅವರ ಬಾಯಿಂದಲೇ ಕೇಳಿ ಅವರಲ್ಲಿ ನಂಬಿಕೆ ಮೂಡಿತು.


ಎರಡು ದಿನಗಳಾದ ಬಳಿಕ ಯೇಸು ಸ್ವಾಮಿ ಅಲ್ಲಿಂದ ಗಲಿಲೇಯಕ್ಕೆ ಹೊರಟರು.


ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು