ಯೋಹಾನ 4:42 - ಕನ್ನಡ ಸತ್ಯವೇದವು C.L. Bible (BSI)42 ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಅನಿ ತೆನಿ ತ್ಯಾ ಬಾಯ್ಕೊಮನ್ಸಿಕ್, “ಅಮಿ ಅತ್ತಾ ವಿಶ್ವಾಸ್, ಕರ್‍ತಾವ್, ಖಾಲಿ ತಿಯಾ ಸಾಂಗಲ್ಲ್ಯಾ ಗೊಸ್ಟಿ ವೈನಾ ನ್ಹಯ್, ಅಮಿ ಅಮ್ಚ್ಯಾ ಕಾನಾನಿ ತೆನಿ ಸಾಂಗ್ತಲಿ ಖಬರ್ ಆಯಿಕ್ಲಾಂವ್, ಅನಿ ಹ್ಯೊಚ್ ಹ್ಯಾ ಜಗಾಚೊ ರಾಕ್‍ನ್ದಾರ್ ಮನುನ್ ಅಮ್ಕಾ ಕಳ್ಳೆ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |