Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:48 - ಕನ್ನಡ ಸತ್ಯವೇದವು C.L. Bible (BSI)

48 ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಯೇಸು ಅವನಿಗೆ - ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದಿದ್ದರೆ ನಂಬುವದೇ ಇಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜೆಜುನ್ ತೆಕಾ,“ಅಜಾಪಾ, ಅನಿ ಚಮತ್ಕಾರಾ ಬಗಟ್ಲ್ಯಾ ಶಿವಾಯ್ ತುಮ್ಚ್ಯಾತ್ಲೆ ಕೊನ್ಬಿ ವಿಶ್ವಾಸ್ ಕರಿನ್ಯಾಸಿ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:48
29 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.


ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಪ್ರೇಷಿತರ ಮುಖಾಂತರ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು.


ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಆ ಅಧರ್ಮಿ ಸೈತಾನನ ಶಕ್ತಿಯೊಂದಿಗೆ ಬರುವನು. ಮೋಸಗೊಳಿಸುವ ಎಲ್ಲಾ ಬಗೆಯ ಪವಾಡಗಳನ್ನು, ಚಮತ್ಕಾರಗಳನ್ನು ಮತ್ತು ಶಕ್ತಿಯುತ ಕಾರ್ಯಗಳನ್ನು ಮಾಡಿತೋರಿಸುವನು.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.


ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.


“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.


ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ಆದರೂ ಆ ಅಧಿಕಾರಿ, “ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ,” ಎಂದು ಅಂಗಲಾಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು