Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:53 - ಕನ್ನಡ ಸತ್ಯವೇದವು C.L. Bible (BSI)

53 ‘ನಿನ್ನ ಮಗ ಬದುಕುತ್ತಾನೆ’ ಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತು. ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆಗ ನಿನ್ನ ಮಗನು ಬದುಕುತ್ತಾನೆಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದಾಯಿತೆಂದು ತಂದೆಯು ತಿಳುಕೊಂಡದರಿಂದ ಅವನೂ ಅವನ ಮನೆಯವರೆಲ್ಲರೂ ಆತನನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 “ನಿನ್ನ ಮಗನು ಬದುಕುವನು” ಎಂದು ಯೇಸು ಹೇಳಿದ್ದು ಇದೇ ಹೊತ್ತಿನಲ್ಲಿ ಎಂಬುದು ತಂದೆಗೆ ತಿಳಿದಿತ್ತು. ಆದ್ದರಿಂದ ಅವನು ಮತ್ತು ಅವನ ಮನೆಯವರೆಲ್ಲ ಯೇಸುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತನ್ನಾ ತ್ಯಾ ಬಾಬಾಕ್ ಜೆಜುನ್,“ತುಜೊ ಲೆಕ್ ಬರೊ ಹೊತಾ”, ಮನುನ್ ಸಾಂಗಲ್ಲೊ ತೊಚ್ ಎಳ್ ತೊ ಮನುನ್ ಯಾದ್ ಯೆಲಿ, ಅಶೆ ತೆನಿ, ಅನಿ ತೆಚ್ಯಾ ಕುಟ್ಮಾಚ್ಯಾ ಸಗ್ಳ್ಯಾನಿ ಜೆಜುಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:53
12 ತಿಳಿವುಗಳ ಹೋಲಿಕೆ  

ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಎಷ್ಟುಹೊತ್ತಿಗೆ ತನ್ನ ಮಗ ಚೇತರಿಸಿಕೊಂಡನೆಂದು ಆ ಅಧಿಕಾರಿ ವಿಚಾರಿಸಿದಾಗ, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಅವನ ಜ್ವರ ಬಿಟ್ಟಿತು,” ಎಂದು ಆಳುಗಳು ಉತ್ತರಕೊಟ್ಟರು.


ಅವನು ಅರ್ಧದಾರಿಯಲ್ಲಿ ಇದ್ದಾಗಲೇ ಆಳುಗಳು ಅವನಿಗೆ ಎದುರಾಗಿ ಬಂದು, “ನಿಮ್ಮ ಮಗ ಬದುಕಿಕೊಂಡ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು