Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:17 - ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಯೇಸು - ನನ್ನ ತಂದೆಯು ಇಂದಿನವರೆಗೂ ಕೆಲಸಮಾಡುತ್ತಾನೆ, ನಾನೂ ಕೆಲಸಮಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರಿಗೆ, “ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜುನ್ ತೆಂಕಾ, “ಮಾಜೊ ಬಾಬಾ ಕನ್ನಾಬಿ ಕಾಮ್ ಕರುನ್ಗೆತುಚ್ ರ್‍ಹಾತಾ, ಅನಿ ಮಿಯಾಬಿ ಕಾಮ್ ಕರುಕುಚ್ ಪಾಜೆ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:17
15 ತಿಳಿವುಗಳ ಹೋಲಿಕೆ  

ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.


ಬಿಗಿದುಕೊಂಡಿರುವೆ ಶಕ್ತಿಶೌರ್ಯದ ನಡುಗಟ್ಟನು I ಬಿಗಿಯಾಗಿ ನಿಲ್ಲಿಸಿರುವೆ ನೀ ಗುಡ್ಡಬೆಟ್ಟಗಳನು II


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು